ಉಡುಪಿ: ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ಡಿಸೆಂಬರ್ 3 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 9 ಗಂಟೆಗೆ ಉಡುಪಿ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ ಟೋಲ್ ವಿಚಾರದ ಕುರಿತು ಸಭೆ, 10 ಗಂಟೆಗೆ ಪುರಭವನದಲ್ಲಿ ದಿಕ್ಸೂಚಿ- ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ವಿಚಾರ ಸಂಕಿರಣ ಕಾರ್ಯಕ್ರಮ, 11.30 ಕ್ಕೆ ಮುನಿಯಾಲು ಕೆ.ಪಿ.ಎಸ್.ಸಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ವರಂಗ ಮೇಲರ್ಬಿಯಲ್ಲಿ ವರಂಗ ರಸ್ತೆ ಗುದ್ದಲಿ ಪೂಜೆ ಕಾರ್ಯಕ್ರಮ, 1 ಗಂಟೆಗೆ ಹೆಬ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಯುವ ಸೌರಭ ಕಾರ್ಯಕ್ರಮ, ಸಂಜೆ 4 ಗಂಟೆಗೆ ಕಾರ್ಕಳ ತಾಲೂಕು ಪಂಚಾಯತ್ನಲ್ಲಿ ನೂತನ ಕಟ್ಟಡ ಉದ್ಘಾಟನೆ, ಸಂಜೆ 7.30 ಕ್ಕೆ ಕೆರ್ವಾಶೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.