ಕಿನ್ನಿಗೋಳಿ: ಇಲ್ಲಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕನ್ನಡ ಚಿತ್ರ ನಟ ಕಿಚ್ಚ ಸುದೀಪ್ ಭಾನುವಾರದಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಪತ್ನಿ ಪ್ರಿಯಾ ಜೊತೆ ಆಗಮಿಸಿದ್ದ ಸುದೀಪ್, ದೇವಳದಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುದೀಪ್ ಜಿಲ್ಲೆಗಾಗಮಿಸಿದ್ದಾರೆ.
ಈ ಸಂದರ್ಭದಲ್ಲಿ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸಿತರಿದ್ದರು.












