ಉಡುಪಿ: ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮಗೆ ಮಂಗಳವಾರ ಮಾಲಾರ್ಪಣೆ ಮಾಡಲಾಯಿತು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.