ಉಡುಪಿ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೇ ಪ್ರಥಮ ಬಾರಿಗೆ ಕರಾವಳಿ ಕರ್ನಾಟಕ್ಕೆ ಕಾಲಿಡುತ್ತಿದ್ದಾರೆ. ಹಿಂದುತ್ವದ ಭದ್ರ ಕೋಟೆಯಲ್ಲಿ ಹಿಂದೂ ಸಂತನ ಆಗಮನವನ್ನು ಸ್ವಾಗತಿಸಲು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಸಜ್ಜಾಗುತ್ತಿದ್ದಾರೆ.
ಇಂಧನ ಸಚಿವ ಸುನಿಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಡಿ.25 ರಂದು ಜಿಲ್ಲೆಯಲ್ಲಿ ನಡೆಯಲಿರುವ ಯುವ ಮತದಾರರ ಸಮಾವೇಶದಲ್ಲಿ ಉ.ಪ್ರ. ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ ಎಂದಿದ್ದಾರೆ.
ಡಿ.6 ರಂದು ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು ೨೦೨೩ ವಿಧಾನಸಭಾ ಚುನಾವಣೆಯಲ್ಲಿ ಅವಿಭಜಿತ ದ.ಕ ಜಿಲ್ಲೆಯ ಎಲ್ಲಾ ಸೀಟುಗಳನ್ನು ಗೆಲ್ಲಲು ತಂತ್ರಗಾರಿಕೆ ರೂಪಿಸುತ್ತಿದೆ, ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದ್ದಾರೆ.