ಉಡುಪಿ: ಗಾಂಧಿ ಆಸ್ಪತ್ರೆ ಉಡುಪಿ, ಎಚ್.ಡಿ.ಎಫ್.ಸಿ ಬ್ಯಾಂಕ್, ಸ್ನೇಹ ಟ್ಯುಟೋರಿಯಲ್, ಲಯನ್ಸ್ ಮತ್ತು ಲಿಯೋ ಕ್ಲಬ್, ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಹಾಗೂ ರಕ್ತನಿಧಿ ಕಸ್ತೂರ್ಬಾ ಆಸ್ಪತ್ರೆ ಸಹಯೋಗದಲ್ಲಿ ಡಿ. 9 ಶುಕ್ರವಾರದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆವರೆಗೆ ಗಾಂಧಿ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.