ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಗಣಿತನಗರ: ವಿದ್ಯಾರ್ಥಿಗಳಲ್ಲಿರುವ ಒತ್ತಡ, ದುಗುಡ, ದುಮ್ಮಾನ ದೂರ ಮಾಡಿ, ಉತ್ಸಾಹದಿಂದ ಬೆಳೆಯಲು ಸಹಕಾರಿ ಕ್ರೀಡೆಯಾಗಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕವಾಗಿ ಗುರುತಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಸಮಾಜದ ಮುಖ್ಯ ವೇದಿಕೆ ಸಿಗಲು ಸಾಧ್ಯವಿದೆ ಎಂದು ಉಡುಪಿ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ವಿಭಾಗದ ಉಪನಿರ್ದೇಕ ಡಾ. ರೋಷಣ್ ಕುಮಾರ್ ಹೇಳಿದರು.

ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಪ.ಪೂ. ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಜ್ಞಾನಸುಧಾ ಸಂಸ್ಥೆ ಮಾದರಿಯಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣೀಕರ್ತರಾದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ವಹಿಸಿದ್ದರು.

ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಸ್ವಾಗತಿಸಿ, ಆಂಗ್ಲ ಭಾಷಾ ಉಪನ್ಯಾಸಕಿ ಸಂಗೀತಾ ನಿರೂಪಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ವಂದಿಸಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪ್ರಜ್ವಲ್ ಕುಲಾಲ್ ವೀಕ್ಷಕ ವಿವರಣಾಕಾರರಾಗಿ ಕಾರ್ಯನಿರ್ವಹಿಸಿದರು.

ಸಮಾರೋಪ ಸಮಾರಂಭ

ಸಂಜೆ ನಡೆದ ವಾರ್ಷಿಕ ಕ್ರೀಡಾ ಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬೈಲೂರು ಪ.ಪೂ. ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ್ ಶೆಟ್ಟಿ ಮಾತನಾಡಿ, ಸೋಲು-ಗೆಲುವುಗಳನ್ನು ಮೀರಿ ಕ್ರೀಡೆಯಲ್ಲಿ ಭಾಗವಹಿಸಬೇಕು ಇಲ್ಲಿ ದೊರಕುವ ಅನುಭವವು ಅಮೂಲ್ಯವಾದುದು ಎಂದರು.

ವಿದ್ಯಾರ್ಥಿಗಳಾದ ಕಾರ್ತಿಕ್ ವೈ, ಸಂಜನಾ ಬೆಸ್ಕೂರು, ಸನ್ನಿಧಿ ವೈಯಕ್ತಿಕ ಒವರ್ ಆಲ್ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡರು.

ಡಾ. ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ವಂದಿಸಿದರು.

ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಪ್ರಾಂಶುಪಾಲ ದಿನೇಶ್.ಎಂ.ಕೊಡವೂರ್, ಉಪಪ್ರಾಂಶುಪಾಲ ಸಾಹಿತ್ಯ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ಸಹಿತ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.