ಡಿ. 20 ರಂದು ಜಿಲ್ಲಾವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಡಿಸೆಂಬರ್ 20 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಕುಂದಾಪುರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಕುಂದಾಪುರ ಮತ್ತು ನಾವುಂದ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ|| ಕೊಂಕಣ ರೈಲ್ವೆ ನಿಗಮ ನಿಯಮಿತದ 110ಕೆವಿ ಸೇನಾಪುರ ಟಿ.ಎಸ್.ಎಸ್ ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ ಸಪ್ಲೈ ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು ಗ್ರಾಮಗಳ
ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ,
ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳ್ಗಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಹೆಬ್ರಿ ಪೀಡರ್‌ನಲ್ಲಿ ಹೆಬ್ರಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಗುಳಿಬೆಟ್ಟು, ಹೆಬ್ರಿ ಪೇಟೆ, ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11 ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬನ್ನಂಜೆ ಫೀಡರಿನಲ್ಲಿ ತುರ್ತು ನಿರ್ವಹಣೆ
ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಅಜ್ಜರಕಾಡು, ಬನ್ನಂಜೆ, ಕಾಡಬೆಟ್ಟು, ವಿದ್ಯಾರಣ್ಯ ಮಾರ್ಗ, ತಾಲೂಕು ಪಂಚಾಯತ್, ಸಿಟಿ ಬಸ್ ಸ್ಟಾಂಡ್, ಸರ್ವೀಸ್ ಬಸ್ ಸ್ಟಾಂಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರೀಯಲ್ ಫೀಡರಿನಲ್ಲಿ
ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಶಿವಳ್ಳಿ ಇಂಡಸ್ಟ್ರೀಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಶಿರ್ವ ಉಪಕೇಂದ್ರದಲ್ಲಿ ಬ್ರೇಕರ್ (ಎಸ್.ಎಫ್-6, ಕ್ಯಾಪಸಿಟರ್ ಬ್ಯಾಂಕ್) ಟೆಸ್ಟಿಂಗ್ ಮತ್ತು ಕಮಿಶನಿಂಗ್
ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಮಾರ್ಗದಲ್ಲಿ ಹಾಗೂ 110/33/11ಕೆವಿ ಮಣಿಪಾಲ ಎಂ.ಯು.ಎಸ್.ಎಸ್ ನಿಂದ ಹೊರಡುವ 11ಕೆವಿ ಉದ್ಯಾವರ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬಂಟಕಲ್ಲು ಗ್ರಾಮ, ಪೊಲಿಪು ಗ್ರಾಮ, ಮೂಡಬೆಟ್ಟು ಗ್ರಾಮ, ಪಾಂಗಳ ಗ್ರಾಮ, ಶಿರ್ವ ಹಾಗೂ ಶಂಕರಪುರ ಗ್ರಾಮ, ಕುರ್ಕಾಲು ಗ್ರಾಮ, ಇನ್ನಂಜೆ ಗ್ರಾಮ, ಕಳತ್ತೂರು ಗ್ರಾಮ (ಪುಂಚಲಕಾಡು), ಪಣಿಯೂರು ಗ್ರಾಮ, ಬಡಾ
ಗ್ರಾಮ(ಉಚ್ಚಿಲ), ಮೂಳೂರು ಗ್ರಾಮ, ಬೆಳಪು ಗ್ರಾಮ, ಮಲ್ಲಾರು ಗ್ರಾಮ, ಅಚ್ಚಡ, ಕೋಟೆ, ಪೊಸಾರು, ಕಟಪಾಡಿ, ಅಗ್ರಹಾರ, ಮಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕೊಳಲಗಿರಿ, ಚೇರ್ಕಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಗ್ಗೇಲ್ ಬೆಟ್ಟು, ಜಾತಾಬೆಟ್ಟು, ಹಾವಂಜೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೇಂಗ್ರೆ, ಗೋಪಾಲಪುರ, ಶಾಂತಿವನ, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಂಬಂಧಪಟ್ಟ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.