ಮರಾಠಾ ಸಮುದಾಯಗಳ ಅರಿವು ಶೈಕ್ಷಣಿಕ ಸಾಲ ಯೋಜನೆ ಅರ್ಜಿ ಸಲ್ಲಿಸಲು ಡಿ.31 ಕೊನೆ ದಿನ

ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ರಾಜಶ್ರೀ ಶಾಹುಮಹಾರಾಜ ವಿದೇಶಿ ವ್ಯಾಸಾಂಗ ಯೋಜನೆಯಡಿ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://kmcdc.karnataka.gov.in ಅಥವಾ ದೂ.ಸಂಖ್ಯೆ: 080-299093994,0820-2574882, ಸಹಾಯವಾಣಿ ಸಂಖ್ಯೆ: 8867537799 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.