ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಕುದುರೆ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಕುದುರೆಯು ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಭಾನುವಾರ ನಡೆದಿದೆ.
ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು ಎಂಬವರಿಗೆ ಸೇರಿದ ಕುದುರೆ ಇದಾಗಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಕುದುರೆಯನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.