ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣ: ಕೆ.ರಘುಪತಿ ಭಟ್

ಕಾರ್ಕಳ: ಇಲ್ಲಿನ ಪರ್ಕಳ-ಮಣಿಪಾಲ ರಾ.ಹೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಮಣಿಪಾಲದಿಂದ ಉಡುಪಿ ಸಂಪರ್ಕಿಸುವ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಕೆಳಪರ್ಕಳ ರಸ್ತೆಯನ್ನು ಸರಿಪಡಿಸಲು ಶಾಸಕ ರಘುಪತಿ ಭಟ್ ಸಭೆ ನಡೆಸಿದ್ದು ಅದರಂತೆ ಈಗ ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು ವಾಹನ ಸಂಚಾರಿಗಳು ನಿಟ್ಟುಸಿರು ಬಿಡುವಂತಾಗಿದೆ.

Image

ಪರ್ಕಳ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ – ಉಡುಪಿ ಸಂಪರ್ಕಿಸುವ ವಾಹನಗಳ ಸುಗಮ ಸಂಚಾರಕ್ಕೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಲು ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ರಸ್ತೆ ಸರಿಪಡಿಸುವಂತೆ ತಿಳಿಸಿದ್ದೆನು, ಅದರಂತೆ ಕೈಗೊಂಡಿರುವ ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಶಾಸಕ ರಘುಪತಿ ಭಟ್ ಟ್ವೀಟ್ ಮಾಡಿ ತಿಳಿಸಿದ್ದಾರೆ.