ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿ ದೈವಾಧೀನ

ವಿಜಯಪುರ: ಇಲ್ಲಿನ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ಸೋಮವಾರದಂದು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಸಿದ್ದೇಶ್ವರ ಸ್ವಾಮೀಜಿ ಅವರ ಅಂತಿಮ ಸಂಸ್ಕಾರಕ್ಕೆ ಸಂಪೂರ್ಣ ರಾಜ್ಯ ಗೌರವವನ್ನು ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಮಂಗಳವಾರ (ಜನವರಿ 3) ವಿಜಯಪುರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ಧೇಶ್ವರ ಸ್ವಾಮೀಜಿಯವರು ಸೋಮವಾರ ಕೊನೆಯುಸಿರೆಳೆದಿದ್ದಾರೆ. ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಜ್ಞಾನಯೋಗಾಶ್ರಮದ ಆಧ್ಯಾತ್ಮಿಕ ನಾಯಕ ಸಿದ್ಧೇಶ್ವರ ಸ್ವಾಮೀಜಿ ಅವರನ್ನು ‘ಉತ್ತರ ಕರ್ನಾಟಕದ ನಡೆದಾಡುವ ದೇವರು’ ಎಂದು ಕರೆಯಲಾಗುತ್ತಿತ್ತು.