ಮುಖ್ಯ ಚುನಾವಣಾ ಕಚೇರಿಯಿಂದ ಅರ್ಹ ಮತದಾರರ ಅಂತಿಮ ಪಟ್ಟಿಯ ಪಿಡಿಎಫ್ ಮಾದರಿ ಬಿಡುಗಡೆ: ನಿಮ್ಮ ಹೆಸರು ಪರೀಕ್ಷಿಸಿಕೊಳ್ಳಿ

ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯು ಅರ್ಹ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಇದರಲ್ಲಿ ಮತದಾರರು ತಮ್ಮ ಹೆಸರು ನೋಂದಾವಣೆಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.

https://ceo.karnataka.gov.in ವೆಬ್ ಸೈಟ್ ನಲ್ಲಿ ಪಿಡಿಎಫ್ ಮಾದರಿಯಲ್ಲಿ ಮತದಾರರು ತಮ್ಮ ಹೆಸರು ಮುಂತಾದ ವಿವರಗಳು ಪರಿಶೀಲಿಸಬಹುದು.

ಮೃತಪಟ್ಟ, ವಿಳಾಸ ಬದಲಿಸಿರುವ ಹಾಗೂ ಕೈಬಿಟ್ಟಿರುವ ಮತದಾರರ ಮಾಹಿತಿಯನ್ನು ಕಾರಣ ಸಮೇತ ಪ್ರಕಟಿಸಲಾಗಿದೆ ಎಂದು ಮುಖ್ಯ ಚುನಾವಣಾ ಕಚೇರಿ ಟ್ವೀಟ್ ಮಾಡಿ ತಿಳಿಸಿದೆ.

ನಿಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಲು ಲಿಂಕ್ ಗೆ ಭೇಟಿ ನೀಡಿ
https://ceo.karnataka.gov.in/FinalRoll_2023/
https://erms.karnataka.gov.in/2022_ADMS_AFTER_DRAFT/