ನಾಳೆ (ಜ.22) ಸಹಕಾರ ರತ್ನ‌ ಪ್ರಶಸ್ತಿ ಪುರಸ್ಕತ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಅಭಿನಂದನಾ ಸಮಾರಂಭ

ಶತಸಂವತ್ಸರಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಡುಪಿಯ ಬಡಗಬೆಟ್ಟು ಕೆಡಿಟ್ ಕೋ ಆಪರೇಟಿವ್ ಸೊಸೈಟಿಯನ್ನು ಕಳೆದ 42 ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಅಭಿವೃದ್ದಿ ಪಥದಲ್ಲಿ ಮುನ್ನಡೆಸಿದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಇವರಿಗೆ ಪ್ರಸಕ್ತ ವರ್ಷದಲ್ಲಿ ಸಹಕಾರ ಕ್ಷೇತ್ರದ ಮಹೋನ್ನತ ಗೌರವ “ಸಹಕಾರ ರತ್ನ” ಪ್ರಶಸ್ತಿ ಲಭಿಸುವುದರಿಂದ ದಿನಾಂಕ 22.01.2023ರ ಆದಿತ್ಯವಾರದಂದು ಪೂರ್ವಾಹ್ನ ಗಂಟೆ 9 ರಿಂದ ಉಡುಪಿಯ ಮಿಷನ್ ಕಂಪೌಂಡಿನಲ್ಲಿರುವ ಬಾಸೆಲ್ ಮಿಷನರೀಸ್ ಆಡಿಟೋರಿಯಂನಲ್ಲಿ ಅಭಿನಂದನಾ ಸಮಾರಂಭ ಹಾಗೂ ಸೇವಾ ಚಿಂತನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಉಡುಪಿಯ ಶಿವಳ್ಳಿ ಗ್ರಾಮದ ಇಂದ್ರಾಳಿಯ ಪ್ರತಿಷ್ಠಿತ ಬಂಟ ಮನೆತನದ ಕೃಷಿಕ ಕುಟುಂಬದಲ್ಲಿ ಜನಿಸಿದ ಶೆಟ್ಟಿಯವರ ಕಾರ್ಯಬಾಹುಳ್ಯ ಕೇವಲ ಸಹಕಾರಿ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರದೆ, ಜಿಲ್ಲೆಯ ಶೈಕ್ಷಣಿಕ, ಸಾಹಿತ್ಯಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ ಕ್ಷೇತ್ರಕ್ಕೂ ವ್ಯಾಪಿಸಿಕೊಂಡಿರುತ್ತದೆ. 1918ನೇ ಇಸವಿಯಲ್ಲಿ ಸ್ಥಾಪನೆಗೊಂಡ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 1978 ರಿಂದ 1981ರ ವರೆಗೆ ವ್ಯವಹಾರ ಸ್ಥಗಿತಗೊಂಡು ಮುಚ್ಚುಗಡೆಯಾಗುವ ಹಂತದಲ್ಲಿದ್ದ ಸಂದರ್ಭ ದಲ್ಲಿ, ಸಹಕಾರದ ಆಡಳಿತಾಧಿಕಾರಿಯವರ ಅಧೀನದ ಅವಧಿಯಲ್ಲಿ ಸಂಸ್ಥೆಗೆ ನೌಕರನಾಗಿ ಸೇರಿ 42 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುವುದರ ಮೂಲಕವಾಗಿ ಸಂಸ್ಥೆಯ ಬೆಳವಣಿಗೆಗೆ ಹೊಸ ಆಯಾಮ ದೊರಕಿಸಿ ಸಂಸ್ಥೆಯು ಬೃಹದಾಕಾರವಾಗಿ ಬೆಳೆಯಲು ಕಾರಣೀಕರ್ತರಾಗಿ ಪ್ರಸ್ತುತ ಸಹಕಾರಿ ಕ್ಷೇತ್ರದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಉಡುಪಿ ಗೃಹನಿರ್ಮಾಣ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವರು.

ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಂಕಿ ಅಂಶಗಳು

ಸಂಸ್ಥೆಗೆ ಸೇರುವ ಅವಧಿಯಲ್ಲಿ

(1980-81)

ಸದಸ್ಯರ ಸಂಖ್ಯೆ 306

ಪಾಲು ಬಂಡವಾಳ ರೂ.6,200/-

ಒಟ್ಟು ಠೇವಣಿ ರೂ.4664/-

ಒಟ್ಟು ಸಾಲ ರೂ.8,809/-

ಲಾಭ/ನಷ್ಟ ನಷ್ಟ

ಪ್ರಸ್ತುತ ಸಂಘದ ಅಂಕಿ ಅಂಶಗಳು

21,474

ರೂ.4.77 ಕೋಟಿ

ರೂ.425.25 ಕೋಟಿ

ರೂ.334.01 ಕೋಟಿ

ಲಾಭ ರೂ.11.01 ಕೋಟಿ (2021-22)

ಸಮಾರಂಭದ ವೇದಿಕೆಯಲ್ಲಿ ವಿಶೇಷವಾಗಿ ಜಯಕರ ಶೆಟ್ಟಿಯವರ ಅಭಿನಂದನಾ ಗ್ರಂಥ “ಜಯಪಥ” ವೂ ಬಿಡುಗಡೆಗೊಳ್ಳಲಿರುವುದು.

2022ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ದ.ಕ ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರು ಶ್ರೀ ಯಶ್ ಪಾಲ್ ಸುವರ್ಣರಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಈ ಸಮಾರಂಭದ ಅಂಗವಾಗಿ ಅದೇ ದಿನ ಪೂರ್ವಾಹ್ನ ಗಂಟೆ 8.30 ಕ್ಕೆ ಸರಿಯಾಗಿ ಉಡುಪಿಯ ಜೋಡುಕಟ್ಟೆಯಿಂದ ಮಿಷನ್ ಆಸ್ಪತ್ರೆಯ ಮಾರ್ಗವಾಗಿ ಬಾಸೆಲ್ ಮಿಷನರೀಸ್ ಆಡಿಟೋರಿಯಂವರೆಗೆ ಸಂಘದ ಸಿಬ್ಬಂದಿಗಳು ಹಾಗೂ ಅತಿಥಿ ಅಭ್ಯಾಗತರೊಂದಿಗೆ ಭವ್ಯ ಮೆರವಣಿಗೆ ಹಮ್ಮಿಕೊಂಡಿದ್ದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಶ್ರೀ ಜಿ.ಟಿ. ದೇವೇಗೌಡರವರು ಮೆರವಣಿಗೆಯನ್ನು ಉದ್ಘಾಟಿಸಲಿರುವರು.

ಪೂರ್ವಾಹ್ನ ಗಂಟೆ 10.00ಕ್ಕೆ ಸರಿಯಾಗಿ ಉಡುಪಿಯ ಬಾಸೆಲ್ ಮಿಷನರೀಸ್ ಆಡಿಟೋರಿಯಂನಲ್ಲಿ ಉಡುಪಿಯ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ಉದ್ಘಾಟಿಸಲಿರುವರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ. ರಘುಪತಿ ಭಟ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್, ವಿನಯಕುಮಾರ್ ಸೊರಕೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಕೆ.ಎಂ.ಸಿ ಮಾಹೆಯ ಡೀನ್ ಆದ ಡಾ. ಪದ್ಮರಾಜ್ ಹೆಗ್ಡೆ, ಹಿರಿಯ ಸಹಕಾರಿ ಶ್ರೀ ಟಿ. ಶಂಭು ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಲಕ್ಷ್ಮೀನಾರಾಯಣ ಜಿ.ಎನ್, ಲೆಕ್ಕ ಪರಿಶೋಧನಾ ಉಪ ನಿರ್ದೇಶಕರಾದ ಶ್ರೀ ಗಣೇಶ್ ಮಯ್ಯ, ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್ ಉಪಸ್ಥಿತರಿರುವರು. ಸೊಸೈಟಿಯ ಅಧ್ಯಕ್ಷರಾದ ಶ್ರೀ ಸಂಜೀವ ಕಾಂಚನ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಉಪಾಧ್ಯಕ್ಷರಾದ ಶ್ರೀ ಎಲ್. ಉಮಾನಾಥ್, ಅಭಿನಂದನಾ ಸಮಿತಿ ಸಂಚಾಲಕರಾದ ಶ್ರೀ ಪುರುಷೋತ್ತಮ ಪಿ.ಶೆಟ್ಟಿ ಹಾಗೂ ಪ್ರಭಾರ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ವಿ. ಶೇರಿ ಗಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.