ಉಡುಪಿ: ಗಣರಾಜ್ಯೋತ್ಸವ ಹಾಗೂ ಮಣಿಪಾಲ್ ಇನ್ ಹೋಟೇಲಿನ 3 ನೇ ವಾರ್ಷಿಕೋತ್ಸವದ ಪ್ರಯುಕ್ತ ಜ.26 ರಂದು ಮಣಿಪಾಲ್ ಇನ್ ಹೋಟೇಲಿನ 7 ನೇ ಮಹಡಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಡಳಿತ ನಿರ್ದೇಶಕ ಮೌಲಾನಾ ಇಬ್ರಾಹಿಂ ಗಂಗೊಳ್ಳಿ ಹೇಳಿದರು.
ಅವರು ಇಂದು ಹೊಟೇಲಿನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಉದುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಮತ್ತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಬೆಳಿಗ್ಗೆ 7.30 ರಿಂದ 11.30 ರವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಜೊತೆಗೆ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ ಸನ್ಮಾನವನ್ನು ಮಾಡಲಾಗುವುದು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ ಅವರು ಹೊಟೇಲಿನ 150 ಮಂದಿ ಸಿಬ್ಬಂದಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಆನಂದ ಕುಮಾರ್, ಮುಖ್ಯ ಬಾಣಸಿಗ ಉಮೇಶ್ ಪೂಜಾರಿ ಉಪಸ್ಥಿತರಿದ್ದರು.