ಕಾರ್ಕಳ: ಪರಶುರಾಮ ಥೀಂ ಪಾರ್ಕ್ ನಲ್ಲಿ ಭಜನಾ ಮಂದಿರ ನಿರ್ಮಾಣವಾಗುವ ಮೂಲಕ ಆಧ್ಯಾತ್ಮಿಕ ಮತ್ತು ಧಾರ್ಮಿಕ ಭಾವನೆ ಉಂಟಾಗಿದೆ. ಜನರಿಂದ ಆಯ್ಕೆಯಾದ ಬಳಿಕ ಮೂಲಸೌಕರ್ಯಕ್ಕೆ ಸೀಮಿತವಾಗಿ ಕೆಲಸ ಮಾಡಿಲ್ಲ. ಪ್ರವಾಸೋದ್ಯಮವೂ ಸೇರಿದಂತೆ ಎಲ್ಲ ಆಯಾಮಗಳಲ್ಲಿ ಪ್ರಗತಿ ಸಾಧಿಸಲು ಪ್ರಯತ್ನಿಸಿದ್ದು, ಮುಂದಿನ ಬಾರಿ ಚುನಾಯಿತಗೊಂಡರೆ ಮುಂದಿನ ಎರಡು ವರ್ಷಗಳೊಳಗೆ ಕಾರ್ಕಳದ ಐತಿಹಾಸಿಕ ರಾಮಸಮುದ್ರವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ಮಾಡುತ್ತೇನೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಅವರು ಶನಿವಾರದಂದು ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಭಜನಾ ಮಂದಿರ ಉದ್ಘಾಟನೆಯ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟಣ್ ಗಣೇಶ್ ಕಾರ್ಣಿಕ್ ಮಾತನಾಡಿ, ಕಾರ್ಕಳ ಉತ್ಸವದ ಬಳಿಕ ಇದೇ ಅಯಾಮದಲ್ಲಿ ರಾಜ್ಯದಲ್ಲಿ ವಿವಿಧೆಡೆ ಎಲ್ಲಾ ಕ್ಷೇತ್ರಗಳಲ್ಲಿ ಉತ್ಸವವನ್ನು ಏರ್ಪಡಿಸುತ್ತಿದ್ದಾರೆ. ಕಾರ್ಕಳ ಉತ್ಸವ ಹಾಗು ಪರಶುರಾಮನ ಥೀಂ ಪಾರ್ಕ್ ಮೂಲಕ ಅರ್ಥಿಕ ಚಟುವಟಿಕೆಗಳ ಪುನಶ್ಚೇತನವಾಗಿದೆ ಎಂದರು.
ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ,ಬೈಲೂರು ರಾಮಕೃಷ್ಣ ಆಶ್ರಮದ ವಿನಯಕನಂದಾಜಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾ ನಿರ್ದೇಶಕ ಭಾಸ್ಕರ್, ಕನ್ನಡ ಸಂಸ್ಕೃತಿ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ , ಉದ್ಯಮಿ ಸತೀಶ್ ಪೈ, ಮುಂತಾದವರು ಉಪಸ್ಥಿತರಿದ್ದರು.
ರವೀಂದ್ರ ಕುಮಾರ್ ಸ್ವಾಗತಿಸಿದರು. ರವೀಂದ್ರ ನಾಯ್ಕ್ ವಂದಿಸಿ. ರಾಜೇಂದ್ರ ಭಟ್ ನಿರೂಪಿಸಿದರು.
ಪರಶುರಾಮ ಛದ್ಮವೇಷ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ವಿದ್ಯುತ್ ದೀಪಾಲಂಕಾರಕ್ಕೆ ಸಹಕರಿಸಿದ ಮೆಸ್ಕಾಂ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.