ಉಡುಪಿ: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಲಯನ್ಸ್ ಕ್ಲಬ್ ವತಿಯಿಂದ ಸುಮಾರು ಐವತ್ತು ಸಾವಿರ ರೂಪಾಯಿ ಮೊತ್ತದ ವಾಷ್ ಬೇಸಿನ್ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ರಾಜ್ಯಪಾಲ ಲಯನ್ ಡಾ. ಎಮ್. ಕೆ. ಭಟ್ ಮಾತನಾಡಿ, ಲಯನ್ಸ್ ಕ್ಲಬ್ ನಂತಹ ಸಂಘ ಸಂಸ್ಥೆಗಳಿಂದ ಸಿಗುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಮಕ್ಕಳು ಸತತ ಅಧ್ಯಯನ ಶೀಲರಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷ ದಿವಾಕರ್ ಶೆಟ್ಟಿ, ಕಾರ್ಯದರ್ಶಿಗಳಾದ ರವಿರಾಜ್ ಯು ಎಸ್, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ರಾಜಗೋಪಾಲ್ ಮತ್ತು ಲಯನ್ಸ್ ಕ್ಲಬ್ಬಿನ ಸದಸ್ಯರು, ಶಾಲೆಯ ಎಸ್.ಡಿ.ಎಮ್.ಸಿ ಗೌರವಾಧ್ಯಕ್ಷೆ ಶ್ರೀಮತಿ ತಾರಾದೇವಿ, ನಿವೃತ್ತ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ, ಉಪನ್ಯಾಸಕ ಮತ್ತು ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಇಂದಿರಾ ವಂದಿಸಿದರು.