ಸಿ.ಎ ಫೌಂಡೇಶನ್ ಪರೀಕ್ಷೆ: ಕ್ರಿಯೇಟಿವ್ ಕಾಲೇಜಿನ ದೀಕ್ಷಾಆಚಾರ್ಯ ಹಾಗೂ ಶ್ರಾವ್ಯಾ ಸಿ.ಎಸ್ ಉತ್ತೀರ್ಣ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ(ICAI) ಡಿಸೆಂಬರ್ ತಿಂಗಳಿನಲ್ಲಿ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ದೀಕ್ಷಾ ಆಚಾರ್ಯ ಮತ್ತು ಶ್ರಾವ್ಯಾ ಸಿ.ಎಸ್ ಉತ್ತಮ ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ.

ದೀಕ್ಷಾ
ಶ್ರಾವ್ಯಾ

ಕ್ರಿಯೇಟಿವ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಯಿಂದಲೇ ಸಿ.ಎ ಮತ್ತು ಸಿ.ಎಸ್.ಇ.ಇ. ಟಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಈ ಹಿಂದೆ ಜೂನ್ ತಿಂಗಳಲ್ಲಿ ನಡೆಸಿದ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಅಮರ್ ಎ.ಎಂ, ಅಭಿಷೇಕ್ .ಲ. ನಾಯ್ಕ ಮತ್ತು ಅಶ್ವಿತಾ ಗಮನಾರ್ಹ ಸಾಧನೆ ಮಾಡಿದ್ದಾರೆ. ದೀಕ್ಷಾ ಅವರು ಪ್ರಸ್ತುತ ತ್ರಿಷಾ ಕ್ಲಾಸಸ್ ನಲ್ಲಿ ಬಿ.ಕಾಂ ಪದವಿಯೊಂದಿಗೆ ಸಿ.ಎ ಅಧ್ಯಯನ ನಡೆಸುತ್ತಿದ್ದಾರೆ. ಈಕೆ ಅಜೆಕಾರಿನ ರತ್ನಾಕರ ಆಚಾರ್ಯ ಮತ್ತು ಶ್ರೀಮತಿ. ಜಯಶ್ರೀ ಆಚಾರ್ಯ ದಂಪತಿಗಳ ಪುತ್ರಿ.

ವಿದ್ಯಾರ್ಥಿಗಳ ಈ ಸಾಧನೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಹೆತ್ತವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.