ಉಡುಪಿ: ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಪ್ರಕರಣ ಸಂಖ್ಯೆ CCC 343/2020 C/w WPNo.15165/2018 ಕ್ಕೆ ಸಂಬಂಧಿಸಿದಂತೆ 18-1-2023 ರಲ್ಲಿ ನೀಡಿದ ನಿರ್ದೇಶನದಂತೆ, ರಾಜ್ಯಾದ್ಯಂತ ಸ್ಮಶಾನ ಭೂಮಿಗಳ ಒತ್ತುವರಿ ಬಗ್ಗೆ ಜಿಲ್ಲೆಯ ನ್ಯಾಯಾಧೀಶರಿಂದ ಪರಿಶೀಲನೆ ನಡೆಸಲಾಗುತ್ತಿದೆ.
ಅದರಂತೆ ಉಡುಪಿ ಜಿಲ್ಲೆಯಲ್ಲಿನ ಒಟ್ಟು 313 ಸ್ಮಶಾನ ಮತ್ತು ಸ್ಮಶಾನಕ್ಕೆ ಕಾಯ್ದಿರಿಸಿದ ಭೂಮಿಗಳ ಒತ್ತುವರಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾಯದರ್ಶಿ ಶರ್ಮಿಳಾ ಅವರು, ಇಂದು ಉಡುಪಿ ತಾಲೂಕಿನ ಸ್ಮಶಾನ ಮತ್ತು ಸ್ಮಶಾನಕ್ಕೆ ಕಾಯ್ದಿರಿಸಿದ ಭೂಮಿಗಳ ಒತ್ತುವರಿ ಬಗ್ಗೆ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಯಾವುದೇ ಒತ್ತುವರಿ ಕಂಡುಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ.
ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಈ ಪರಿಶೀಲನಾ ಕಾರ್ಯದಲ್ಲಿ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿಗಳೂ ಸಹ ಭಾಗವಹಿಸಿದ್ದಾರೆ.