ಕುಂದಾಪುರ : ರಾಷ್ಟ್ರ ಮಟ್ಟದಲ್ಲಿ ಜರುಗಿದ 2023ನೇ ಸಾಲಿನ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು 85 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ್ದಾರೆ.
ಆಧುನಿಕ ಶಿಕ್ಷಣ ಪದ್ಧತಿಗೆ ಪೂರಕವಾಗುವಂತೆ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಯಿಂದಲೇ CET NEET JEE ಪರೀಕ್ಷೆಗೆ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಸಜ್ಜುಗೊಳಿಸಲಾಗುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು, ತಮ್ಮ ಕಠಿಣ ಪರಿಶ್ರಮದೊಂದಿಗೆ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ನಿತೇಶ್ (94.58 ಪರ್ಸಂಟೈಲ್ ) ಪ್ರಣಮ್ಯ (91.82 ಪರ್ಸಂಟೈಲ್) ಸನತ್ ಶೆಟ್ಟಿ (90.60 ಪರ್ಸಂಟೈಲ್ ) ರಿಷಿ(87.58 ಪರ್ಸಂಟೈಲ್ ) ನಾಗರಾಜ (85.93 ಪರ್ಸಂಟೈಲ್) ಪಡೆದು ತೇರ್ಗಡೆ ಹೊಂದಿ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.












