ವಾರಂಬಳ್ಳಿಯಲ್ಲಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ವಾರಂಬಳ್ಳಿ: ಬ್ರಹ್ಮಾವರ ತಾಲೂಕು ವಾರಂಬಳ್ಳಿ ಗ್ರಾಮದ ಸ.ನಂ. 150 ರಲ್ಲಿ ನಿವೇಶನಕ್ಕಾಗಿ ಕಾಯ್ದಿರಿಸಿದ
ಸ್ಥಳದಲ್ಲಿನ ವಿವಿಧ ಜಾತಿಯ 445 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 20 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್

[email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ
ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.