ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಸ್ಪರ್ಧೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ ಕೇಂದ್ರ ಸರಕಾರದಿಂದ ನೀಡಲಾಗುವ ನಗದು ಪುರಸ್ಕಾರಕ್ಕೆ ವೆಬ್‌ಸೈಟ್ ಡಿ.ಬಿ.ಟಿ- ಎಂ.ಐ.ಎಸ್ ಪೋರ್ಟಲ್ https://dbtvas-sports.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.