ಕುಂದಾಪುರ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಉದ್ಯಮ ಅಥವಾ
ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಮಳೆ ನೀರಿನ ಚರಂಡಿಗೆ ಹರಿಯಬಿಡುವುದನ್ನು ನಿಷೇಧಿಸಲಾಗಿದೆ.
ಪ್ರಕಟಣೆಯ 7 ದಿನಗಳ ಒಳಗಾಗಿ ತ್ಯಾಜ್ಯ ನೀರು ಮಳೆ ನೀರು ಚರಂಡಿಗೆ ಹರಿಯಬಿಡುತ್ತಿರುವುದನ್ನು ತಕ್ಷಣ ಸ್ಥಗಿತಗೊಳಿಸಿ, ತಮ್ಮ ಸ್ವಂತ ಜಾಗದಲ್ಲಿ ಸೆಪ್ಟಿಕ್ ಟ್ಯಾಂಕ್ ಅಥವಾ ಇಂಗು ಗುಂಡಿ ಮೂಲಕ ವಿಲೇ ಮಾಡಬೇಕು. ತಪ್ಪಿದ್ದಲ್ಲಿ ಪುರಸಭಾ ಅಧಿನಿಯಮದ ಪ್ರಕಾರ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.