ಕುಂದಾಪುರ: ಜಿಲ್ಲೆಯ ಜನಸಾಮಾನ್ಯರು ಹಲವಾರು ಸಮಸ್ಯೆಗಳಿಂದ ಕೆಲಸವಿಲ್ಲದೇ ಆದಾಯ ಕುಂಠಿತವಾಗಿರುವುದು ಒಂದಡೆಯಾದರೆ ರಾಜ್ಯದಲ್ಲಿ ಬರಪರಿಸ್ಥಿತಿ ಇರುವ ಸನ್ನಿವೇಶದಲ್ಲಿ ಸರಕಾರವು ವಿದ್ಯುತ್ ದರ ಏರಿಕೆ ಮಾಡಿರುವುದು ಜನರಿಗೆ ಬಗೆದ ದ್ರೋಹವಾಗಿದೆ ಎಂದು ಸಿಪಿಎಂ ಪಕ್ಷದ ಕುಂದಾಪುರ ಕಾರ್ಯದರ್ಶಿ ಎಚ್ ನರಸಿಂಹ ಹೇಳಿದರು.
ಅವರು ಕುಂದಾಪುರ ಮೆಸ್ಕಾಂ ಕಛೇರಿ ಎದುರು ವಿದ್ಯುತ್ ದರ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.ಜನರು ಸಂಕಷ್ಟದಲ್ಲಿದ್ದರೂ ವಿದ್ಯುತ್ ಬಿಲ್ ಗಳನ್ನು ಪಾವತಿ ಮಾಡುತ್ತಿದ್ದಾರೆ.ವಿದ್ಯುತ್ ಸೋರಿಕೆಯು ತಡೆಯಲಾಗುತ್ತಿದೆ ಎಂದು ಹೇಳಲಾಗುತ್ತಿದ್ದರೂ ಸರಕಾರವು ದರ ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡುತ್ತಿರುವುದರಿಂದ ಸರಕಾರ ಜನವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ವಿದ್ಯುತ್ ದರ ಏರಿಕೆಯಿಂದ ಜನಸಾಮಾನ್ಯರ ಅಗತ್ಯ ವಸ್ತುಗಳ ಮೇಲೆಯೂ ಪರಿಣಾಮ ಬೀರಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತದೆ ಆದ್ದರಿಂದ ಏರಿಸಿದ ದರವನ್ನು ಕೂಡಲೇ ಹಿಂಪಡೆಯಬೇಕೆಂದು ಅವರು ಆಗ್ರಹಿಸಿದರು.
ವಿದ್ಯುತ್ ದರ ಹಿಂಪಡೆಯಲು ಕೋರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆಯಲ್ಲಿ ಸಿಪಿಎಂ ಮುಖಂಡರಾದ ಕೆ.ಶಂಕರ್,ಮಹಾಬಲವಡೇರಹೋಬಳಿ,ದಾಸಭಂ