ಫೆ.18 ಮತ್ತು 20ರಂದು ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಸಚಿವರ ಪ್ರವಾಸ

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಫೆಬ್ರವರಿ 18 ಮತ್ತು 20 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ. 18 ರಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, ಬೆ. 9.30 ಕ್ಕೆ ಹೊಂಬಾಡಿ ಮಂಡಾಡಿಯಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಡಿಯಲ್ಲಿ ಡಿ.ಬಿ.ಟಿ ಮೂಲಕ ಅನುಷ್ಠಾನಗೊಳ್ಳುತ್ತಿರುವ ಕೊಳವೆ ಬಾವಿಗೆ ಚಾಲನೆ, 11 ಕ್ಕೆ ಕಾಪು ತಾಲೂಕು ಕಳತ್ತೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನಾ ಕಾರ್ಯಕ್ರಮ ನಂತರ ಕೋಟದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ವಾಸ್ತವ್ಯ ಮಾಡಲಿದ್ದಾರೆ.

ಫೆ. 20 ರಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, ಬೆ. 9.30 ಕ್ಕೆ ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಕೋಟದಲ್ಲಿ ವಾಸ್ತವ್ಯ ಮಾಡಲಿರುವರು.