ಕಡ್ತಲ ಗ್ರಾ.ಪಂ: ಸ್ವಚ್ಛ ಮೇವ ಜಯತೆ ಆಂದೋಲನ

ಉಡುಪಿ, ಜೂನ್ 11: ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛ ಮೇವ ಜಯತೆ ಆಂದೋಲನ ಕಾರ್ಯಕ್ರಮವು ಮಂಗಳವಾರ ಸರಕಾರಿ ಪದವಿ ಪೂರ್ವ ಕಾಲೇಜು ದೊಂಡೇರಂಗಡಿಯಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಚಂದ್ರಿಕಾ ಕಿಣಿ ಉದ್ಘಾಟಿಸಿ, ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಫರ್ಜಾನ ಎಂ., ಸ್ವಚ್ಛ ಮೇವ ಜಯತೆ ಆಂದೋಲನದ ಬಗ್ಗೆ ವಿವರಣೆ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ತೆಂಗಿನ ಸಸಿ ನೆಟ್ಟು ಸ್ವಚ್ಛ ಮೇವ ಜಯತೆಗೆ ಚಾಲನೆ ನೀಡಿದರು. ನಂತರ ಶಾಲಾ ಮಕ್ಕಳಿಂದ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಎಸ್.ಡಿ.ಎಂ.ಸಿ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.