ಪುತ್ತೂರು ಆದಿವಾಸಿ ಸಮುದಾಯ ಭವನ ಉದ್ಘಾಟನೆ: ಶಾಸಕರಿಂದ ಪರಿಶೀಲನೆ

ಉಡುಪಿ: ಪುತ್ತೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಆದಿವಾಸಿ ಸಮುದಾಯ ಭವನದ ಉದ್ಘಾಟನೆಯನ್ನು ಫೆಬ್ರವರಿ 26 ರಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಅವರು ನೆರವೇರಿಸಲಿದ್ದು, ಬುಧವಾರದಂದು ಶಾಸಕ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪೂರ್ವ ತಯಾರಿಯ ಬಗ್ಗೆ ಅಧಿಕಾರಿಗಳು ಹಾಗೂ ಕೊರಗ ಸಮುದಾಯದವರೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ನಾಮ ನಿರ್ದೇಶಿತ ಸದಸ್ಯೆ ಸುಬೇದಾ, ಉಡುಪಿ ತಹಶೀಲ್ದಾರ್ ಭೀಮಸೇನ್, ಕಂದಾಯ ನಿರೀಕ್ಷಕ ಉಪೇಂದ್ರ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ದೂದ್ ಪೀರ್, ಕೊರಗ ಸಮುದಾಯದ ಮುಖಂಡ ಗಣೇಶ್, ಬೊಗ್ರ ಕೊರಗ ಮತ್ತು ಕೊರಗ ಸಮುದಾಯದವರು ಉಪಸ್ಥಿತರಿದ್ದರು.