ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಕರ್ನಾಟಕದ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಗಳಾದ ಮನ್ ಸುಖ್ ಮಾಂಡವೀಯ ಹಾಗೂ ಕೆ. ಅಣ್ಣಾಮಲೈ ಭೇಟಿ ನೀಡಿ, ಭಾರತ ಮಾತೆಯ ಭಾವಚಿತ್ರಕ್ಕೆ ಹಾಗೂ ಜಗನ್ನಾಥ್ ರಾವ್ ಜೋಷಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ ಮುಂತಾದವರು ಉಪಸ್ಥಿತರಿದ್ದರು.