ಮಾ.13 ರಿಂದ 15ರ ವರೆಗೆ ಜಿಲ್ಲೆಯಲ್ಲಿ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರಿಂದ ಚಾಲನೆಗೊಂಡು ರಾಜ್ಯದಾದ್ಯಂತ ನಡೆಯಲಿರುವ ‘ವಿಜಯ ಸಂಕಲ್ಪ ಯಾತ್ರೆ’ ಮಾ.13 ರಿಂದ 15ರ ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ನೆರವೇರಲಿದೆ ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ. ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಮಾರ್ಚ್ 13, ಮಧ್ಯಾಹ್ನ 3.30ಕ್ಕೆ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಆಗಮನ, ಪ್ರಮುಖ ಸ್ಥಳಗಳಲ್ಲಿ ಸ್ವಾಗತ, ರೋಡ್ ಶೋ. ಸಂಜೆ 5.30ಕ್ಕೆ ಸಾರ್ವಜನಿಕ ಸಭೆ

ಮಾರ್ಚ್ 14, ಬೆಳಿಗ್ಗೆ 9.00ಕ್ಕೆ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಧಾರ್ಮಿಕ ಸ್ಥಳ ಹಾಗೂ ಪ್ರಮುಖ ವ್ಯಕ್ತಿಗಳ ಬೇಟಿ, ಪತ್ರಿಕಾ ಗೋಷ್ಠಿ, ರೋಡ್ ಶೋ.

ಮಾರ್ಚ್ 14, ಮದ್ಯಾಹ್ನ 2.30ಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಆಗಮನ. ಪ್ರಮುಖ ಸ್ಥಳಗಳಲ್ಲಿ ಸ್ವಾಗತ ಮತ್ತು ರೋಡ್ ಶೋ.

ಮಾರ್ಚ್ 14, ಸಂಜೆ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮನ. ಪ್ರಮುಖ ಸ್ಥಳಗಳಲ್ಲಿ ಸ್ವಾಗತ, ಸಂಜೆ 5.30ಕ್ಕೆ ಸಾರ್ವಜನಿಕ ಸಭೆ

ಮಾರ್ಚ್ 15, ಬೆಳಿಗ್ಗೆ 9.00ಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಧಾರ್ಮಿಕ ಸ್ಥಳ ಹಾಗೂ ಪ್ರಮುಖ ವ್ಯಕ್ತಿಗಳ ಬೇಟಿ. ಪತ್ರಿಕಾ ಗೋಷ್ಠಿ. ರೋಡ್ ಶೋ. ಬಳಿಕ ಶೃಂಗೇರಿ ವಿಧಾನಸಭಾ ಕ್ರೇತ್ರಕ್ಕೆ ತೆರಳಲಿದೆ.

‘ವಿಜಯ ಸಂಕಲ್ಪ ಯಾತ್ರೆ’ಯ ರಾಜ್ಯ ಸಹ ಸಂಚಾಲಕರಾಗಿ ಕಿಶೋರ್ ಕುಮಾರ್ ಕುಂದಾಪುರ ಹಾಗೂ ಜಿಲ್ಲಾ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸಹ ಸಂಚಾಲಕರಾಗಿ ಗಿರೀಶ್ ಎಮ್. ಅಂಚನ್ ಮತ್ತು ಅನಿತಾ ಶ್ರೀಧರ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಕ್ರಿಯವಾಗಿ ಭಾಗವಹಿಸಿ ‘ವಿಜಯ ಸಂಕಲ್ಪ ಯಾತ್ರೆ’ಯನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ವಿನಂತಿಸಿದರು.

ಫೆ.26 ಬೆಳಿಗ್ಗೆ 11.00ಕ್ಕೆ ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ವೀಕ್ಷಣೆ:

ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರಚಲಿತ ವೈಶಿಷ್ಟ್ಯಪೂರ್ಣ ವಿದ್ಯಮಾನಗಳಿಗೆ ಬೆಳಕು ಚೆಲ್ಲುವ ವಿಚಾರಗಳೊಂದಿಗೆ ಪ್ರತೀ ತಿಂಗಳ ಕೊನೆಯ ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ನಡೆಸಿಕೊಡುವ ಮನ್ ಕೀ ಬಾತ್ ಕಾರ್ಯಕ್ರಮ ಫೆ.26ರಂದು ನಡೆಯಲಿದೆ.

ಪಕ್ಷದ ಸೂಚನೆಯಂತೆ, ಫೆ.26 ರವಿವಾರ ಬೆಳಿಗ್ಗೆ 11.00 ಗಂಟೆಗೆ ಪ್ರಸಾರವಾಗುವ ಪ್ರಧಾನಿ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಬೂತ್ ಅಧ್ಯಕ್ಷರ ಸಹಿತ ಬೂತ್ ಸಮಿತಿ ಸದಸ್ಯರು, ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಮತ್ತು ಪಕ್ಷದ ಹಿತೈಷಿಗಳು ವೀಕ್ಷಿಸುವ ಜೊತೆಗೆ 2 ಫೋಟೋ ಮತ್ತು ವಿವರವನ್ನು ಕಾರ್ಯಕ್ರಮ ಮುಗಿದ ತಕ್ಷಣ ಬೂತ್ ಅಧ್ಯಕ್ಷರು ನಿಗದಿತ ಲಿಂಕ್ ಮೂಲಕ ಅಪ್ಲೋಡ್ ಮಾಡುವಂತೆ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ವಿನಂತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಮತ್ತು ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ ಉಪಸ್ಥಿತರಿದ್ದರು.