ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಉದ್ಘಾಟಿಸಿದರು. ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ 80 ನೇ ಜನ್ಮದಿನದಂದು ಅವರ ಚುನಾವಣಾ ಕ್ಷೇತ್ರದಲ್ಲಿ ವಿಶ್ವದರ್ಜೆಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವಿಮಾನ ನಿಲ್ದಾಣವು ಕಮಲದ ಆಕಾರದಲ್ಲಿದೆ.

ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್ ಕಟ್ಟಡವು ಗಂಟೆಗೆ 300 ಪ್ರಯಾಣಿಕರನ್ನು ನಿಭಾಯಿಸಬಲ್ಲದು. ಈ ವಿಮಾನ ನಿಲ್ದಾಣವು ಶಿವಮೊಗ್ಗ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ಇತರ ನೆರೆಯ ಪ್ರದೇಶಗಳ ವಾಯುಯಾನ ಸಂಪರ್ಕವನ್ನು ಸುಧಾರಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಕರ್ನಾಟಕಕ್ಕೆ ಪ್ರಧಾನಿ ಮೋದಿಯವರ ಐದನೇ ಭೇಟಿಯಾಗಿದೆ.