ಬೆಂಗಳೂರು: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,ಪ್ರಸಕ್ತ ವರ್ಷದ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದೆ.
ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ.
ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಹಣಕಾಸು ಅಧಿಕಾರಿಗಳೊಂದಿಗೆ ಸಹ ಚರ್ಚಿಸಿ, ರಾಜ್ಯ ಸರ್ಕಾರಿ ನೌಕರರಿಗೆ , ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಆದೇಶಿಸಲಾಗಿದೆ. ಎನ್.ಪಿ.ಎಸ್ ಕುರಿತಂತೆ ಸಮಿತಿಯೊಂದನ್ನು ರಚಿಸಿ, ಅದರ ವರದಿಯನುಸಾರ ಕ್ರಮ ಕೈಗೊಳ್ಳುತ್ತೇವೆ. pic.twitter.com/tsrgCtf86B
— CM of Karnataka (@CMofKarnataka) March 1, 2023
ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ಇದರ ಅನ್ವಯ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆ, ವಿವಿ ಬೋಧಕೇತರ ಸಿಬ್ಬಂದಿ, ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.
ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಸರ್ಕಾರ ಈ ಅಧಿಕೃತ ಆದೇಶ ಹೊರಡಿಸಿದೆ. ಏತನ್ಮಧ್ಯೆ, ಎನ್.ಪಿ.ಎಸ್ ಕುರಿತಂತೆ ಸಮಿತಿಯೊಂದನ್ನು ರಚಿಸಿ, ಅದರ ವರದಿಯನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.