ಉಡುಪಿ: ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಗೆಲುವು ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯಾಗಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ.
ಅನೇಕ ವರ್ಷಗಳ ಕಾಲ ಪಕ್ಷ ಸಂಘಟನೆ ಕ್ಲಿಷ್ಟಕರವಾಗಿದ್ದ ಈಶಾನ್ಯ ರಾಜ್ಯಗಳಾದ ತ್ರಿಪುರ ಮತ್ತು ನ್ಯಾಗಲ್ಯಾಂಡ್ ಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಗೆ ಜನ ಮನ್ನಣೆ ನೀಡಿದ್ದಾರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನ ಮೆಚ್ಚಿದ್ದು,ಈ ಫಲಿತಾಂಶ ನಮ್ಮೆಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ. ಕಾಂಗ್ರೆಸ್ ಪಕ್ಷ ಈಶಾನ್ಯ ರಾಜ್ಯಗಳಲ್ಲಿ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಮುಂದಿನ ಚುನಾವಣೆ ಯಲ್ಲಿ ಕರ್ನಾಟಕ ರಾಜ್ಯ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಇದೇ ರೀತಿ ತಕ್ಕ ಉತ್ತರವನ್ನು ನೀಡಲಿದ್ದಾರೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.