ಉಡುಪಿ: ಜಿಲ್ಲಾಡಳಿತ. ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಬಳಕೆದಾರರ ವೇದಿಕೆ (ರಿ), ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 15 ರಂದು ಬೆಳಗ್ಗೆ 10 ಗಂಟೆಗೆ ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ರಘುನಾಥ ಕೆ.ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸುನಿಲ್ ಜೆ ಮಾಸರೆಡ್ಡಿ, ಉಡುಪಿ ಬಳಕೆದಾರರ ವೇದಿಕೆಯ ಸಂಚಾಲಕ ಎ.ಪಿ ಕೊಡಂಚ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.