ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. 10 ದಿನಗಳ ಬಳಿಕ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ.ಮಾ.27 ನೇ ತಾರೀಖಿನಿಂದ ಪರೀಕ್ಷೆ ಪ್ರಾರಂಭಿಸಬೇಕು. ಆದರೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂದು ಸೂಚಿಸಿದೆ.