ರಾಹುಲ್ ಗಾಂಧಿ ‘ಸಂಸತ್ ಸದಸ್ಯತ್ವ’ ರದ್ದು

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಶುಕ್ರವಾರ ಹೊರಡಿಸಿದೆ.

C.C./18712/2019 ರಲ್ಲಿ ಸೂರತ್‌ನ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರಿಗೆ ಶಿಕ್ಷೆ ವಿಧಿಸಿದ ಪರಿಣಾಮವಾಗಿ, ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ಶ್ರೀ ರಾಹುಲ್ ಗಾಂಧಿ ಅವರು ಅಪರಾಧ ಸಾಬೀತಾದ ದಿನಾಂಕದಿಂದ ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖವಾಗಿದೆ.

ಪ್ರಕರಣದ ಹಿನ್ನಲೆ: 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೋಲಾರದಲ್ಲಿ ಮಾತನಾಡಿದ್ದ ರಾಹುಲ್‌, ನೀರವ್‌ ಮೋದಿಯಾಗಿರಲಿ, ಲಲಿತ್‌ ಮೋದಿಯಾಗಿರಲಿ ಅಥವಾ ನರೇಂದ್ರ ಮೋದಿಯಾಗಿರಲಿ, ಎಲ್ಲ ಕಳ್ಳರ ಸರ್‌ ನೇಮ್‌ ಕೂಡ ಮೋದಿಯೇ ಆಗಿರುವುದೇಕೆ?ಎಂದು ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಗುಜರಾತ್‌ನ ಮಾಜಿ ಸಚಿವ, ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಎಂಬವರು ರಾಹುಲ್‌ ವಿರುದ್ಧ ಮಾನಹಾನಿ ಕೇಸು ದಾಖಲಿಸಿ ಕೋರ್ಟ್‌ ಮೆಟ್ಟಿಲೇರಿದ್ದರು.