ಉಡುಪಿ, ಜೂನ್ 15: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಜೂನ್ 18 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.30 ಕ್ಕೆ ಉಡುಪಿಗೆ ಆಗಮಿಸಿ, ಜಿಲ್ಲೆಯ ಪ್ರವಾಹ/ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು, ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಹ/ ಬರ ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.