ಉಡುಪಿ, ಜೂನ್ 15: 21ನೇ ಆರೂರು ಗ್ರಾಮ ಪಂಚಾಯತ್ನ 2019-20 ನೇ ಸಾಲಿನ ಪ್ರಥಮ ಹಂತದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮ ಸಭೆಯು ಶನಿವಾರ ಆರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ನೋಡೆಲ್ ಅಧಿಕಾರಿ, ತೋಟಗಾರಿಕಾ ಇಲಾಖೆಯ ಅಧಿಕಾರಿ ದೀಪಾ ವಹಿಸಿದ್ದರು. ಸಭೆಯಲ್ಲಿ ತಾಲೂಕು ಸಂಯೋಜಕ ಪ್ರವೀಣ್ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.
ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೀವ ಕುಲಾಲ್ ಮಾತನಾಡಿ, ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಹತ್ವದ ಬಗ್ಗೆ ಹಾಗೂ ಇದರ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಂಡು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಅತ್ಯಂತ ಯಶಸ್ವಿಗೊಳಿಸುವಲ್ಲಿ ಜನರ ಪಾತ್ರ ಬಹು ಮುಖ್ಯ ಎಂದು ತಿಳಿಸಿದರು.
ಕಾರ್ಯದರ್ಶಿ ಹಿಂದಿನ ಸಾಲಿನ ವರದಿಯನ್ನು ಸಭೆಗೆ ಮಂಡಿಸಿದರು.
ಸಭೆಯಲ್ಲಿ ಉಪಾಧ್ಯಕ್ಷ ಗಣೇಶ್ ಕುಲಾಲ್, ಸದಸ್ಯರಾದ ಮಾಲಿನಿ ಶೆಟ್ಟಿ, ಸುಶೀಲ ಬಾಯಿ, ಮನೋಜ್ ನಾಯ್ಕ, ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಕಾವ್ಯ ಪ್ರಭಾಕರ್, ರಾಜೇಶ್, ಸುಮಲತ ನಾಯ್ಕ ಹಾಗೂ ಫಲಾನುಭವಿಗಳು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಗೀತಾ ಬಾಳಿಗಾ ಸ್ವಾಗತಿಸಿ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಯೋಜನದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಗೀತಾ ಬಾಳಿಗಾ ನಿರೂಪಿಸಿ, ವಂದಿಸಿದರು.












