ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಆದ್ದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ಚುನಾವಣಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಚಾರ, ಶುಭಕೋರುವ ಹಾಗೂ ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಂಗ್ಸ್, ಕಟೌಟ್ ಅಳವಡಿಸಲು, ಭಿತ್ತಿ ಪತ್ರ ಹಂಚಲು, ಭಿತ್ತಿ ಪತ್ರಗಳನ್ನು ಗೋಡೆಗೆ ಅಂಟಿಸಲು ಹಾಗೂ ಗೋಡೆ ಬರಹ ಬರೆಯಲು ಸ್ಥಳಿಯಾಡಳಿತದಿಂದ ಅನುಮತಿ ನೀಡದಿರಲು ಆದೇಶಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.