ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸೂಚನೆಯಂತೆ ವಿಧಾನಸಭಾ ಅಭ್ಯರ್ಥಿಗಳ ಬಗ್ಗೆ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರ ಮಟ್ಟದಿಂದ ಮೇಲ್ಪಟ್ಟ ಪದಾಧಿಕಾರಿಗಳು ಮತ್ತಿತರ ಪ್ರಮುಖರ ಮಂಡಲವಾರು ಅಭಿಪ್ರಾಯದ ಮತದಾನದ ವರದಿಯನ್ನು ಬಿಜೆಪಿ ರಾಜ್ಯ ತಂಡ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಹಸ್ತಾಂತರಿಸಿತು
ಈ ಸಂದರ್ಭದಲ್ಲಿ ರಾಜ್ಯತಂಡದ ನೇತೃತ್ವ ವಹಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ, ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮತ್ತಿತರರು ಉಪಸ್ಥಿತರಿದ್ದರು.