ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಚುನಾವಣೆಯ ಪೂರ್ವ ತಯಾರಿ ಸಭೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲು ಮಂಗಳವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ‌ ಸಭೆ ನಡೆಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ವಾರ್ಡ್‌ ಹಾಗೂ ಪಂಚಾಯತ್‌ ಗಳಿಗೆ ಉಸ್ತುವಾರಿಗಳ ನೇಮಕ ಮಾಡುವ ಬಗ್ಗೆ ಮತ್ತು ಪ್ರತಿ ವಾರ್ಡಿನಲ್ಲಿ ಸಭೆಯನ್ನು ನಡೆಸುವುದರ ಬಗ್ಗೆ ತೀರ್ಮಾನಿಸಲಾಯಿತು. ಸದಸ್ಯರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾಯಕರಾದ ಎಂ ಏ ಗಫೂರ್, ಕುಶಲ್ ಶೆಟ್ಟಿ, ದಿವಾಕರ್ ಕುಂದರ್, ಪ್ರಖ್ಯಾತ್ ಶೆಟ್ಟಿ, ದಿನೇಶ್ ಪುತ್ರನ್, ನರಸಿಂಹಮೂರ್ತಿ, ಸುರೇಂದ್ರ ಆಚಾರ್ಯ, ಸುರೇಶ್ ಶೆಟ್ಟಿ ಬನ್ನಂಜೆ, ಸೌರಭ್ ಬಲ್ಲಾಳ್, ಮೀನಾಕ್ಷಿ ಮಾಧವ ಬನ್ನಂಜೆ, ಅಣ್ಣಯ್ಯ ಶೇರಿಗಾರ್, ಮಮತಾ ಶೆಟ್ಟಿ, ಗಣೇಶ್ ನೆರ್ಗಿ, ಅಮೃತ್ ಶೆಣೈ, ಪ್ರಸಾದ್ ರಾಜ್ ಕಾಂಚನ್, ಅದ್ವಿತ್ ಮೊಯ್ಲಿ, ನಾಸಿರ್ ಯಾಕೂಬ್, ವಿಜಯ್ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಕೊಡವೂರು ವಂದಿಸಿದರು.