ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣೆ ಮತ್ತು ಪ್ರಚಾರ ಕಾರ್ಯಗಳಲ್ಲಿ ರಾಜಕೀಯ ಪಕ್ಷದವರು ಚುನಾವಣೆಯ ರ್ಯಾಲಿಯಲ್ಲಿ, ಕರಪತ್ರ ಹಂಚುವಿಕೆ ಕೆಲಸದಲ್ಲಿ, ಪ್ರಚಾರ ಕಾರ್ಯಗಳಲ್ಲಿ ಮತ್ತು ಇತರೆ ಕೆಲಸಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.
ಈ ಆದೇಶಕ್ಕೆ ವ್ಯತಿರಿಕ್ತವಾಗಿ ಮಕ್ಕಳನ್ನು ಬಳಸಿಕೊಂಡಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.