ಬ್ರಹ್ಮಾವರ: ಎಸ್.ಎಂ.ಎಸ್.ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ಫುಡ್ ಫೆಸ್ಟ್ 2023 ಕಾರ್ಯಕ್ರಮವು ಏಪ್ರಿಲ್ 8 ರಂದು ಅದ್ದೂರಿಯಾಗಿ ನೆರವೇರಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು 18 ತಂಡಗಳಲ್ಲಿ 200 ಕ್ಕೂ ಅಧಿಕ ಆಹಾರ ಪದಾರ್ಥಗಳನ್ನು ತಯಾರಿಸಿ ತೀರ್ಪುಗಾರರ ಹಾಗೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ಓ.ಎಸ್.ಸಿ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ, ಕಾಲೇಜಿನ ಸಂಚಾಲಕರಾದ ರೆ.ಫಾ ಎಂ.ಸಿ.ಮಥಾಯ್, ಓ.ಎಸ್.ಸಿ.ಶಿಕ್ಷಣ ಸಮೂಹ ಸಂಸ್ಥೆಯ ಉಪಾಧ್ಯಕ್ಷ ರೆ.ಫಾ. ಲಾರೆನ್ಸ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಅಲೆನ್ ರೋಹನ್ ವಾಜ್, ಕಾರ್ಯದರ್ಶಿ ಅಲ್ವರಿಸ್ ಡಿಸಿಲ್ವಾ, ಖಜಾಂಚಿ ಜೋಯ್ಸನ್ ರೋಡ್ರಿಗಸ್, ಪ್ರಾಂಶುಪಾಲ ಡಾ. ಮಂಜುನಾಥ ಉಡುಪ, ವಿದ್ಯಾರ್ಥಿ ಸಂಘದ ನಿರ್ದೇಶಕಿ ಡಾ. ವಿದ್ಯಾಲತಾ, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಮತ್ತು ಪೋಷಕರು ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ತೀರ್ಪುಗಾರರಾಗಿ ಮ್ಯಾಕ್ಸಿಮ್ ಡಿಸಿಲ್ವ, ಭರತ್ ಶೆಟ್ಟಿ ಮತ್ತು ರಾಘವೇಂದ್ರ ಭಟ್ ಸಹಕರಿಸಿದರು.
ಈ ಅಂತರ್ ತರಗತಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ತೃತೀಯ ಬಿಕಾಂ ಎ , ದ್ವಿತಿಯ ಸ್ಥಾನ ಎಂಕಾಂ , ತೃತೀಯ ಸ್ಥಾನ ತೃತೀಯ ಬಿಕಾಂ ‘ಸಿ ‘ ತರಗತಿಗಳು ಪಡೆದುಕೊಂಡವು .