ಉಡುಪಿ: ಬಿಜೆಪಿ ಪಕ್ಷ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿರುವುದಕ್ಕೆ ನಾನೇ ಉದಾಹರಣೆ. ಪಕ್ಷ ಕೊಟ್ಟ ಸಲಹೆ ಸೂಚನೆಯನ್ನು ಪಾಲಿಸುತ್ತೇನೆ. ಎಂದು ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ ಹೇಳಿದ್ದಾರೆ.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಷ್ಟ್ರೀಯ ಚಿಂತನೆ ಹಿಂದೂ ಸಮಾಜದ ರಕ್ಷಣೆ ನನ್ನ ಧ್ಯೇಯ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಮಂತ್ರವನ್ನು ಮುಂದಿಟ್ಟುಕೊಂಡು ಕೆಲಸ ಮಾಡುತ್ತೇನೆ. ನಾನು ಒಂದು ಕ್ಷೇತ್ರಕ್ಕೆ ಸೀಮಿತವಾಗಿ ಕೆಲಸ ಕಾರ್ಯಗಳನ್ನು ಮಾಡಿಲ್ಲ. ಪಕ್ಷದ ಚಟುವಟಿಕೆಗಳನ್ನು ಬಹಳ ಪ್ರಾಮಾಣಿಕವಾಗಿ ನಾನು ಮಾಡಿದ್ದೇನೆ ಎಂದರು.
ನಾನು ಹಿಂದೂ. ನಾನು ಒಂದು ಜಾತಿಗೆ ಸೀಮಿತವಾಗಿಲ್ಲ. ನಾನು ಹುಟ್ಟುವಾಗ ಮೊಗವೀರ ಜಾತಿಯಲ್ಲಿ ಹುಟ್ಟಿದ್ದೇನೆ. ಅದಕ್ಕೆ ನ್ಯಾಯ ಕೊಡುತ್ತೇನೆ. ಮೀನುಗಾರಿಕೆ, ಸಹಕಾರಿ, ಹಿಂದೂ ಸಂಘಟನೆ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುತ್ತೇನೆ. ಶಾಸಕ ರಘುಪತಿ ಭಟ್ ಅವರನ್ನು ಇವತ್ತು ಭೇಟಿಯಾಗುತ್ತೇನೆ. ಕಳೆದ ಬಹಳ ವರ್ಷಗಳಿಂದ ಅವರ ಜತೆ ಕೆಲಸ ಮಾಡಿದ್ದೇನೆ.ಶಾಸಕರ ಮಾರ್ಗದರ್ಶನ, ಸಹಕಾರದಲ್ಲಿ ಚುನಾವಣೆಯನ್ನು ಎದುರಿಸುತ್ತೇನೆ. ಅವರ ಜೊತೆ ಜನರ ಬಳಿ ಹೋಗಿ ಮತ ಪ್ರಚಾರ ಮಾಡುತ್ತೇನೆ.ಎಂದು ಯಶ್ಪಾಲ್ ಎ ಸುವರ್ಣ ಹೇಳಿದರು.