ಸ್ಟಾಫ್ ಸೆಲೆಕ್ಷನ್ ಕಮೀಷನ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಮತ್ತು ಸಹಾಯಕ ಲೆಕ್ಕ ಪತ್ರ ಅಧಿಕಾರಿ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಹಾಗೂ https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಲು ಮೇ 3 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.