ಲಕ್ನೋ: ಉತ್ತರ ಪ್ರದೇಶದ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ, ಹಲವಾರು ಪೋಲೀಸರಿಂದ ಸುತ್ತುವರಿದಿದ್ದು, ಸುದ್ದಿಗಾರರೊಂದಿಗೆ ಸಂವಾದ ನಡೆಸುತ್ತಿದ್ದಾಗ ಎಲ್ಲಿಂದಲೋ ಬಂದವರು ಇಬ್ಬರ ತಲೆಗೂ ಗುಂಡು ಹಾರಿಸಿದ್ದಾರೆ. ಕೈಕೋಳ ಹಾಕಿದ್ದ ಅಪರಾಧಿಗಳು ಅಲ್ಲಿಯೇ ಕುಸಿದುಬಿದ್ದಿದ್ದು, ದೃಶ್ಯದ ವಿಡಿಯೋ ವೈರಲ್ ಆಗಿದೆ.
ಆಸ್ಪತ್ರೆಗೆ ತಪಾಸಣೆಗೆಂದು ಕರೆದೊಯ್ಯುತ್ತಿದ್ದಾಗ ಈ ದಾಳಿ ನಡೆಸಲಾಗಿದೆ. ಅತೀಕ್ ಅಹ್ಮದ್ನ ಮಗ ಪೊಲೀಸ್ ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟ ಕೆಲವೇ ದಿನಗಳಲ್ಲಿ ಅತೀಕ್ ಮೇಲೆ ದಾಳಿ ನಡೆದಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಹ್ಮದ್ ಮತ್ತು ಆತನ ಸಹೋದರನನ್ನು ಹೊಡೆದುರುಳಿಸಿದ ಮೂವರು ಹಂತಕರನ್ನು ತಕ್ಷಣವೇ ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಕರಣದ ತನಿಖೆಗಾಗಿ ಮೂವರು ಸದಸ್ಯರ ನ್ಯಾಯಾಂಗ ಆಯೋಗವನ್ನು ರಚಿಸಿದ್ದಾರೆ.
ಮಾಜಿ ರಾಜಕಾರಣಿ, ಅತೀಕ್ ಅಹ್ಮದ್ ವಿರುದ್ಧ ಅಪಹರಣ ಮತ್ತು ಕೊಲೆ ಸೇರಿದಂತೆ ಸುಮಾರು 100 ಪ್ರಕರಣಗಳು ದಾಖಲಾಗಿವೆ. ಮಾರ್ಚ್ 28 ರಂದು, ಅಪಹರಣ ಪ್ರಕರಣದಲ್ಲಿ ನ್ಯಾಯಾಲಯವು ಅಹ್ಮದ್ ಮತ್ತು ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.