ಉಡುಪಿ: ಪ್ರಧಾನಿ ಮೋದಿ ಮೇ 4ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮೇ 4ರಂದು ಉಡುಪಿ ಜಿಲ್ಲಾ ಕೇಂದ್ರ ಅಥವಾ ಸೂಕ್ತ ಪ್ರದೇಶದಲ್ಲಿ ಸಮಾವೇಶ ನಡೆಯುವ ಸಾಧ್ಯತೆ ಇದೆ. ಪ್ರಧಾನಿ ಜಿಲ್ಲೆಗೆ ಭೇಟಿ ನೀಡಲಿರುವ ಬಗ್ಗೆ ಕೇಂದ್ರದ ನಾಯಕರು ಜಿಲ್ಲಾ ಪ್ರಮುಖರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅನುಕೂಲ ಆಗುವಂತೆ ಸೂಕ್ತ ಪ್ರದೇಶದಲ್ಲಿ ಮೇ 4ರಂದು ಪ್ರಧಾನ ಮೋದಿ ಸಮಾವೇಶ ನಡೆಯಲಿದೆ. ಈ ಬಗ್ಗೆ ಕೇಂದ್ರ ನಾಯಕರು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಯೋಗಿ ಆದಿತ್ಯನಾಥ್ ಕೂಡ ಚುನಾವಣ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್ ಕೂಡ ರಾಷ್ಟ್ರೀಯ ನಾಯಕರು, ಸ್ಟಾರ್ ಪ್ರಚಾರಕರನ್ನು ಜಿಲ್ಲೆಗೆ ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.