ಉಡುಪಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ- 8 ರಿಂದ 13 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ

ಉಡುಪಿ: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 10 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಮೇ 12 ರಂದು ಮಧ್ಯರಾತ್ರಿ 12 ಗಂಟೆಯಿಂದ ಮೇ 13 ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ,ಹೋಟೆಲ್, ಕ್ಲಬ್ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಿ,ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.