ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಲಾಯಿಪಾದೆ ಚೆಕ್‌ಪೋಸ್ಟ್ ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು. ಚೆಕ್ ಚೆಕ್‌ಪೋಸ್ಟ್ ಮೂಲಕ ಹಾದು ಹೋಗುವ ಎಲ್ಲ ವಾಹನಗಳನ್ನು ಸಂಪೂರ್ಣವಾಗಿ ತಪಾಸಣೆ ನಡೆಸುವಂತೆ ಹಾಗೂ ಯಾವುದೇ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಲು ಸಿಬಂದಿಗೆ ಸೂಚಿಸಿದರು.












