ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿಯವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರವೀಣ್ ಸೂಡ ಕೆರೆಬೆಟ್ಟು ಬಿಜೆಪಿ ರೈತ ಮೋರ್ಚಾದ ಕಾರ್ಯದರ್ಶಿ, ಅರುಣ್ ಕುಮಾರ್ ಶೆಟ್ಟಿ, ಹರೀಶ್ ಕುಮಾರ್ ಹಾಗೂ ಶ್ರೀನೀವಾಸ್ ಪೂಜಾರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಸುಬೀತ್ ಎನ್.ಆರ್, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ದೀಪಕ್ ಕೋಟ್ಯಾನ್ ಉಪಸ್ಥಿತಿತರಿದ್ದರು.