ಕಾಪು: ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವು ಪಕ್ಷದ ಚುನಾವಣಾ ಕಾರ್ಯಾಲಯದಲ್ಲಿ ನೆರವೇರಿತು. ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರು ರತ್ನಾಕರ ಹೆಗ್ಡೆ ಬಿಡುಗಡೆ ಮಾಡಿದರು.
ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಪ್ರಣಾಳಿಕೆಯಲ್ಲಿರುವ ಅಭಿವೃದ್ಧಿಗಳನ್ನು ನೆರವೇರಿಸುದಾಗಿ ಭರವಸೆ ನೀಡಿದರು. ನಾವೆಲ್ಲರೂ ಕಾಪು ಕ್ಷೇತ್ರವನ್ನು ರಾಜ್ಯದ ನಂಬರ್ 1 ಕ್ಷೇತ್ರವನ್ನಾಗಿ ಮಾಡೋಣ ಎಂದರು.
ಈ ಸಂಧರ್ಭ ಕಾಪು ವಿಧಾನಸಭಾ ಶಾಸಕ ಲಾಲಾಜಿ ಮೆಂಡನ್, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ದೆಹಲಿ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ವಿಜೇಂದ್ರ ಗುಪ್ತ, ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಬಂಟ್ವಾಳ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಕ್ಷೇತ್ರ ಚುನಾವಣಾ ಪ್ರಣಾಳಿಕೆ ಸಮಿತಿ ಸದಸ್ಯರಾದ ಉಪೇಂದ್ರ ನಾಯಕ್, ಕೇಸರಿ ಯುವರಾಜ್, ಕಾಪು ಕ್ಷೇತ್ರ ಮಾಧ್ಯಮ ಸಂಯೋಜಕ ಕಿರಣ್ ಆಳ್ವ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೆಲ್ಲರೂ ಉಪಸ್ಥಿತರಿದ್ದರು.