ಮೇ.6 ರವರೆಗೂ ರಾಜ್ಯದ ವಿವಿಧೆಡೆ ‘ಮಳೆ’ ಸಾಧ್ಯತೆ..!!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆ ರಾಜ್ಯದ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಯಾದಗಿರಿ ಜಿಲ್ಲೆಗಳ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ, ನಿನ್ನೆ ಬುಧವಾರ ಬೆಳಗ್ಗೆ ಹಾಗೂ ಸಂಜೆ ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆಯಾಗಿದೆ.

ಬೆಂಗಳೂರಿನ ಹಲವೆಡೆ ನಿನ್ನೆ ವರುಣ ತಂಪೆರೆದಿದ್ದು, ಮೇ.6 ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ನಗರದ ಹಲವು ಕಡೆ ನಿನ್ನೆ ಮಳೆಯಾಗಿದೆ. ರಿಚ್ಮಂಡ್ ರಸ್ತೆ, ಕಾರ್ಪೊರೇಷನ್ ವೃತ್ತ, ನಂಜಪ್ಪ ಸರ್ಕಲ್ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2-3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆ ರಾಜ್ಯದ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಯಾದಗಿರಿ ಜಿಲ್ಲೆಗಳ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.